ಪ್ರಗತಿವಾಹಿನಿ ಸುದ್ದಿ; ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಇಕೋ ಬೀಚ್ ಬಳಿ ನಡೆದಿದೆ.
ರಾಮ ನಾಗೇಶ್ (32) ಆತ್ಮಹತ್ಯೆಗೆ ಶರಣಾಗಿರುವ ಕಾನ್ಸ್ ಟೇಬಲ್. ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದ ರಾಮ ನಾಗೇಶ್, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಜೂಜು, ಆನ್ ಲೈನ್ ಆಟದಿಂದ ರಾಮ ನಾಗೇಶ್ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಳೆದ ಕೆಲ ತಿಂಗಳಿಂದ ಕರ್ತವ್ಯಕ್ಕೂ ಹಾಜರಾಗದೆ ಗೈರಾಗಿದ್ದರು. ಇಂದು ಏಕಾಏಕಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಹೊನ್ನಾವರ ಪೊಲೀಸ್ ಠಾಣೆ ವ್ಯಾಪಿಯಲ್ಲಿ ಪ್ರಕರಣ ನಡೆದಿದೆ.
*ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಮಾಜಿ ಸಿಎಂ ಕುಮಾರಸ್ವಾಮಿ*
https://pragati.taskdun.com/h-d-kumaraswamyreactionravi-subrahmanya/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ