Latest

*ರಮೇಶ್ ಜಾರಕಿಹೊಳಿ ಕೋರ್ಟ್ ನಲ್ಲಿ ಅಫಿಡಫಿಟ್ ಯಾಕೆ ಹಾಕಿದ್ದಾರೆ? ; ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ತೀರ್ಥಹಳ್ಳಿ: ಕಾಂಗ್ರೆಸ್ ನಲ್ಲಿ ನಾಯಕರಿಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್, ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಆದರೆ ಅಮಿತ್ ಶಾ ಅವರು ಈ ಹಿಂದೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದು, ಇತ್ತೀಚೆಗೆ ಪ್ರಧಾನಿ ನರೇದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದಿದ್ದಾರೆ. ಬಿಜೆಪಿಯವರು ಯಡಿಯೂರಪ್ಪನವರಿಗೆ ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ದು ಯಾಕೆ? ಈ ಬಗ್ಗೆ ಮೊದಲು ಅವರು ಉತ್ತರ ನೀಡಲಿ ಎಂದು ಹೇಳಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅವರಿಗೆ 75 ವರ್ಷ ದಾಟಿದ್ದರೂ ಯಡಿಯೂರಪ್ಪನವರ ಮುಖಂಡತ್ವದಲ್ಲಿ ಚುನಾವಣೆ ಮಾಡಿ, ನಂತರ ಆಪರೇಷನ್ ಕಮಲಕ್ಕೆ ಅವಕಾಶ ನೀಡಿ, ನಂತರ ಅವರಿಂದ ಯಾವ ತಪ್ಪಾಗಿತ್ತು ಎಂದು ಅಧಿಕಾರ ಕಿತ್ತುಕೊಂಡಿರಿ? ಎಂದು ಜನರಿಗೆ ಮಾಹಿತಿ ನೀಡಲಿ ಎಂದು ಸವಾಲು ಹಾಕಿದರು.

Home add -Advt

ಇದೇ ವೇಳೆ ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಬಗ್ಗೆ ಸುದ್ದಿಗಾರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ಅವರ ವಿಚಾರವಾಗಿ ಮಾತನಾಡುವುದಿಲ್ಲ. ಅವರ ಬೇಡಿಕೆ ಏನಿದೆ ಅದನ್ನು ಈಡೇರಿಸಲಿ. ಆದರೆ ಕೋರ್ಟ್ ನಲ್ಲಿ ಅಫಿಡಫಿಟ್ ಯಾಕೆ ಹಾಕಿದ್ದಾರೆ? ಅವರು ಯಾವ ಮನವಿ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲಿ ಎಂದರು.

ಮಂತ್ರಿ ಸ್ಥಾನ ಕಳೆದುಕೊಂಡ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಪೇಚಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಮಾತಾಡುತ್ತಿದ್ದಾರೆ. ಆರೋಗ್ಯ ಸಚಿವರಿಗೆ ಶಿಫಾರಸ್ಸು ಮಾಡಿ ಚಿಕಿತ್ಸೆ ಕೊಡಿಸಲಿ. ಕೆಲವರು ನನ್ನ ಬಗ್ಗೆ ಮಾತನಾಡಿದರೆ ಮಾತ್ರ ಅವರ ಪಕ್ಷದಲ್ಲಿ ಮಾರ್ಕೆಟ್ ಇರುತ್ತದೆ. ಇಲ್ಲದಿದ್ದರೆ ಅವರ ಪಕ್ಷದಲ್ಲೇ ಅವರನ್ನು ಮಾತನಾಡಿಸುವುದಿಲ್ಲ ಎಂದು ಟೀಕಿಸಿದರು.

*BJPಯಲ್ಲಿ ಯಡಿಯೂರಪ್ಪ ಕಡೆಗಣನೆ; ಸ್ಪಷ್ಟನೆ ನೀಡಿದ ಬಿಎಸ್ ವೈ*

https://pragati.taskdun.com/b-s-yedyurappareactionbjpsideline/

 

*ಪೇಶ್ವೆ ವಂಶಸ್ಥರು ಬಿಎಸ್ ವೈಗೆ ಅಧಿಕಾರ ನಡೆಸಲು ಬಿಡಲಿಲ್ಲ; ಮತ್ತೆ ಕಿಡಿಕಾರಿದ ಕುಮಾರಸ್ವಾಮಿ*

https://pragati.taskdun.com/h-d-kumaraswamyb-s-yedyurappaprahlad-joshiuttara-kannada/

 

Related Articles

Back to top button