Latest

*ಬಜೆಟ್ ಅಧಿವೇಶನ ಆರಂಭ; ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿವರಿಸಿದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ಸರ್ಕಾರದ ಸಾಧನೆಯ ಬಗ್ಗೆ ವಿವರಿಸಿದರು.

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಈ ಜನವರೆಗೆ ಶೇ.91ರಷ್ಟು ರಾಜಸ್ವ ಸಂಗ್ರಹ ಗುರಿ ಸಾಧಿಸಲಾಗಿದೆ. ಪ್ರಸಕ್ತ ಬಜೆಟ್ ನ ಶೇ.75ರಷ್ಟು ವೆಚ್ಚ ಮಾಡಲಾಗಿದೆ. ರಾಜ್ಯದಲ್ಲಿ ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ ಎಂದರು.

ಜಾನುವಾರುಗಳ ಚರ್ಮಗಂಟು ರೋಗ ತಡೆಗಟ್ಟಲು 1 ಕೋಟಿಗೂ ಅಧಿಕ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಗೋವುಗಳ ಪೋಷಣೆಗೆ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೂ ನೀರಿನ ಸೌಲಭ್ಯ ಒದಗಿಸಲಾಗಿದೆ. ಪ್ರತಿ ಶಾಲೆಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗಾಗಿ ಶಾಲೆಯಲ್ಲಿ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಣೆ ಮಾಡಲಾಗುತ್ತಿದೆ. ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ ವಿದ್ಯಾರ್ಥಿ ವೇತನ ನೀಡಲಾಗಿದೆ. 150 ಕೋಟಿ ವೆಚ್ಚದಲ್ಲಿ 1 ಲಕ್ಷದ 614 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ನೀಡಲಾಗುತ್ತಿದೆ. ಬಾಲ್ಯವಿವಾಹ ತಡೆಗೆ ಸ್ಪೂರ್ಥಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿಯೇ ಎನ್ ಇಪಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಸಮಾಜ ಕಲ್ಯಾಣ ಇಲಾಖೆ ನಿಗಮದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದಡಿ ಬೆಳಗಾವಿಯಲ್ಲಿ ಕ್ರಾಂತಿವೀರ‍ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ತೆರೆಯಲಾಗಿದೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲಾಗಿದೆ.

ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ರೋಜ್ ಗಾರ್ ನೀತಿ ಆರಂಭಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಈ ವರ್ಷ 50 ಜನರಿಗೆ ಕೆಲಸ ನೀಡಲಾಗಿದೆ. ವಿಮಾನಯಾನ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಏರ್ ಆರೋಗ್ಯ ಚಿಕಿತ್ಸಾಲಯಪೋರ್ಟ್ ಉದ್ಘಾಟನೆಗೊಳ್ಳಲಿದೆ. ವಿಜಯಪುರ, ಹಾಸನ ವಿಮಾನ ನಿಲ್ದಾಣ ಕಾಮಗಾರಿ ಮುಗಿದಿದ್ದು, ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರೈತಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂ ಡಿಸೆಲ್ ಸಹಾಯಧನ ನೀದಲಾಗಿದೆ. ಕೃಷಿ ಸಂಜೀವಿನಿ ಯೋಜನೆಯಡಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಚಾಲನೆ ದೊರೆತಿದೆ. ರೈತರು, ಬಡವರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ರಾಜ್ಯ ಅಭಿವೃದ್ಧಿಯತ್ತ ದಾಪುಗಾಲಿಟ್ಟಿದೆ ಎಂದು ಹೇಳಿದರು.

*ಕಳೆದ ವರ್ಷದ ಬಜೆಟ್ ಓದಿ ನಗೆಪಾಟಲಿಗೀಡಾದ ಸಿಎಂ*

https://pragati.taskdun.com/rajasthan-budgetcm-ashok-gehlot-reads-old-budgetfor-seven-minutes/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button