ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನು ಮತ್ತೆ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್.ಅಶೋಕ್ ಅವರನ್ನು ಕೈ ಬಿಡಲಾಗಿದೆ. ಮಂಡ್ಯಕ್ಕೆ ಸಧ್ಯ ಯಾರನ್ನೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ, ಬೇರೆ ಸಚಿವರನ್ನು ಉಸ್ತುವಾರಿ ಸಚಿವರನ್ನಾಗಿ ಶೀಘ್ರವೇ ನೇಮಕ ಮಾಡಲಾಗುವುದು ಎಂದರು.
ಕಂದಾಯ ಸಚಿವ ಆರ್.ಅಶೋಕ್ ಅವರು, ಪತ್ರ ಬರೆದು ಈಗಾಗಲೇ ದಾವಣಗೆರೆಯಲ್ಲಿ ಹಕ್ಕು ಪತ್ರ ನೀಡುವ ಕೆಲಸ, ಗ್ರಾಮ ವಾಸ್ತ್ಯವ್ಯ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಮಂಡ್ಯ ಜಿಲ್ಲೆಯ ಉಸ್ತುವಾರಿಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಉಸ್ತುವಾರಿಯಿಂದ ಅವರನ್ನು ಕೈಬಿಡಲಾಗಿದೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಆರ್.ಅಶೋಕ್ ನೇಮಕಕ್ಕೆ ಜಿಲ್ಲೆಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ ಕೂಡ ಆರಂಭಗೊಂಡಿತ್ತು. ಇದರ ಬೆನ್ನಲ್ಲೇ ಸಿಎಂ ಬಸಾರಾಜ್ ಬೊಮ್ಮಾಯಿ ಮಂಡ್ಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.
*BDA ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
https://pragati.taskdun.com/bda-officelokayukta-raidbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ