Kannada NewsKarnataka NewsLatest

ಹೊಸ ರೈಲು ಸಂಖ್ಯೆ 06526 ನಾಳೆ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :

ಹೊಸ ರೈಲು ಸಂಖ್ಯೆ ೦೬೫೨೬ ರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ 6 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆಯಲಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ  ಸುರೇಶ ಅಂಗಡಿ ಹಸಿರು ನಿಶಾನೆ ತೋರಿಸುವರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಜೈವಿಕ ಮತ್ತು ಪರಿಸರ ಸಚಿವರಾದ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ ಕೋರೆ, ಲೋಕಸಭಾ ಸದಸ್ಯರಾದ ಅಣ್ಣಾಸಾಹೇಬ ಜೊಲ್ಲೆ, ಸರ್ಕಾರದ ಮುಖ್ಯಸಚೇತಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಿಗಿಮಠ, ಸರ್ಕಾರದ ಸಂಸದೀಯ ಕಾರ್ಯದರ್ಶಿಗಳು ಹಾಗೂ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಸರ್ಕಾರದ ಸಂಸದೀಯ ಕಾರ್ಯದರ್ಶಿಗಳು ಹಾಗೂ ಖಾನಾಪೂರ ಶಾಸಕರಾದ ಡಾ. ಅಂಜಲಿ ಹೇಮಂತ ನಿಂಬಾಳಕರ, ಮೈಸೂರು ಮಿನಿರಲ್ಸ್ ಚೆರಮನ್ನರು ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಜಿಲ್ಲಾ ಪಂಚಾಯತ ಅಧ್ಯಕ್ಷರಾದ  ಆಶಾ ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ವಿಧಾನ ಪರಿಷತ್ ಸದಸ್ಯರಾದ ವಿವೇಕರಾವ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪೂರ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ ಬೆನಕೆ, ಬೆಳಗಾವಿ ದಕ್ಷಿಣ ವಲಯದ ವಿಧಾನಸಭಾ ಶಾಸಕರಾದ ಅಭಯ ಪಾಟೀಲ  ವಹಿಸುವರು.
ಈ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನ ಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿರುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button