Latest

*BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿ, ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಸಿ ಕಚೇರಿಯಲ್ಲಿನ ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಪಾಸಣೆ ಅವಧಿಯಲ್ಲಿ ಬಿಬಿಸಿ ಕಚೇರಿ, ಸ್ಟುಡಿಯೋಗಳನ್ನು ಮುಚ್ಚಲಾಗುತ್ತಿದ್ದು, ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಸೂಚಿಸಲಾಗಿದೆ.

ಇತ್ತೀಚೆಗೆ ಬಿಬಿಸಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಇಂದಿಯಾ; ದಿ ಮೋದಿ ಕ್ವೆಶ್ಚನ್ ಎಂಬ ಡಾಕ್ಯುಮೆಂಟರಿ ನಿರ್ಮಿಸಿ ಪ್ರಸಾರ ಮಾಡಿತ್ತು. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ ಪಾತ್ರ ಇದೆ ಎಂಬಂತೆ ಬಿಂಬಿಸಲಾಗಿತ್ತು. ಡಾಕ್ಯುಮೆಂಟರಿಯ ಲಿಂಕ್ ಗಳನ್ನು ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳಿಂದ ತೆಗೆಸಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ.

*4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಅಮಿತ್ ಶಾ*

https://pragati.taskdun.com/amith-shahkarnatakabjp-winvidhanasabha-election/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button