ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಈ ಮೂಲಕ ಕಲುಷಿತ ನೀರಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅನಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ನಿನ್ನೆ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 35 ವರ್ಷದ ಸಾವಿತ್ರಮ್ಮ ಹಾಗೂ 72 ವರ್ಷದ ಸಾಯಮ್ಮ ಎಂಬ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.
ತಡರಾತ್ರಿ ನರಸಮ್ಮ ಎಂಬ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವಿಸಿ ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ ನರಸಮ್ಮ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅನಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಯ ಪೈಪ್ ಲೈನ್ ಸೋರಿಕೆಯಾಗಿ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 16 ಜನರನ್ನು ಯಾದಗಿರಿ ಜಿಲ್ಲಾಸ್ಪತ್ತ್ರೆಗೆ ದಾಖಲಿಸಲಾಗಿದೆ. ಇಂದು ಮತ್ತೆ 7 ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಲೆ ನಿರ್ಧರಿಸುವುದು ವಸ್ತುವಿನ ಗುಣಕ್ಕೆ. ಮೌಲ್ಯ ನಿರ್ಧಾರವಾಗುವುದು ಶ್ರೇಷ್ಠತೆಯ ಗುಣಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ