ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಪ್ರಸಕ್ತಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿದ್ದು, ಮಹತ್ವದ ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ.
ಬಜೆಟ್ ಗೂ ಮುನ್ನ ಸಿಎಂ ಬೊಮ್ಮಾಯಿ ಟೆಂಪಲ್ ರನ್ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು.
ಈ ವೇಳೆ ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
*ಬಜೆಟ್ ಮಂಡನೆಗೂ ಮುನ್ನ ಸಿಎಂ ಬೊಮ್ಮಾಯಿ ದೇವಸ್ಥಾನಗಳ ಭೇಟಿ; ವಿಶೇಷ ಪೂಜೆ*
https://pragati.taskdun.com/karnataka-buidget-2023cm-basavaraj-bommaitemple-run/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ