ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಬಜೆಟ್ ನಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯನ್ನು ಘೋಷಣೆ ಮಾಡಿರುವುದು ಸಂತಸದ ವಿಚಾರ. ಇದು ಹಿಂದುಳಿದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಮೆಡಿಕಲ್ ಸೆಲ್ ನ ರಾಜ್ಯ ಸಹ ಸಂಚಾಲಕ ಡಾ.ರವಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
ಬೆಳಗಾವಿಯಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸುತ್ತಿರುವುದು ಅಭಿವೃದ್ಧಿಕೆ ಪೂರಕವಾಗಿದೆ ಎಂದರು.
ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ಪಾರಂಪರಿಕ ದೇವಾಲಯಗಳು, ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಡಿದೆ. ಈ ನಿಟ್ಟಿನಲ್ಲಿ ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಬೀದರ್ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, 3D projection mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 60 ಕೋಟಿ ರೂ. ಗಳನ್ನು ಮೀಸಲಿಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಬಜೆಟ್ 2023-24: ಸಮಗ್ರ ಮಾಹಿತಿ
https://pragati.taskdun.com/karnataka-budget-2023-24cm-basavaraj-bommaividhanasoudha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ