Latest

*ಡಿ.ಕೆ.ರವಿ ವಿಚಾರ ಪ್ರಸ್ತಾಪಿಸಿ ಮತ್ತಷ್ಟು ಪ್ರಶ್ನೆ ಮುಂದಿಟ್ಟ ಡಿ.ರೂಪಾ; ರೋಹಿಣಿ ಸಿಂಧೂರಿ ವಿರುದ್ಧ ಕೇಸ್ ಹಾಕುವ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಮುಂದುವರೆದಿದ್ದು, ರೋಹಿಣಿ ಸಿಂಧೂರಿ ಮಾಧ್ಯಮ ಪ್ರಕಟಣೆಗೆ ಡಿ.ರೂಪಾ ಮತ್ತೆ ಕಿಡಿಕಾರಿದ್ದಾರೆ.

ಡಿ.ಕೆ ರವಿ ಸತ್ತದ್ದು mental illness ನಿಂದ ಅಂತ ರೋಹಿಣಿ ಸಿಂಧೂರಿ ಹೇಳುತ್ತಾರೆ. ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಳಿಸಿದ್ದೇಕೆ? ನನ್ನ ಪ್ರಶ್ನೆ ಇಷ್ಟೇ… ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ?. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ?. ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ IAS ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿ ಎಂದು ಆಗ್ರಹಿಸಿದ್ದಾರೆ.

ಸಂಧಾನಕ್ಕೆ MLA ಬಳಿ ಹೋದದ್ದು ಯಾಕೆ. ಯಾವ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಅಥವಾ ಯಾವ ಅನೈತಿಕ ನಡತೆ ಮುಚ್ಚಲು? ಉತ್ತರಿಸಿ. ನನಗೆ ಬೇಡ, ಸರ್ಕಾರಕ್ಕೆ ಉತ್ತರಿಸಿ. ರೋಹಿಣಿ ಸಿಂಧೂರಿ ಯಾವ forum ಹೋದರೂ, ಸತ್ಯ ಸತ್ಯವೇ. ಸತ್ಯ ಮಣಿಸಲು ಸಾಧ್ಯವಿಲ್ಲ. ಈ ಬಾರಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ನನ್ನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸುತ್ತೇನೆ ಎಂದು ರೂಪಾ ತಿಳಿಸಿದ್ದಾರೆ.

*ಡಿ.ರೂಪಾ ಆರೋಪಕ್ಕೆ ಮೌನಮುರಿದ ರೋಹಿಣಿ ಸಿಂಧೂರಿ; ಕೇಸ್ ದಾಖಲಿಸಲು ನಿರ್ಧಾರ*

https://pragati.taskdun.com/rohini-sindhurireactiond-roopa/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button