
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಬಳಿಕ ಚೇತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಂಗಳೂರು, ದಕ್ಷಿಣ ಕನ್ನಡ ಭಾಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ವೇಳೆ ಇಂದು ಬೆಳಿಗ್ಗೆ ಏಕಾಏಕಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತಪಾಸಣೆ ಬಳಿಕ ಅರುಣ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇದೀಗ ಮತ್ತೆ ಚುನಾವಣಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅರುಣ್ ಸಿಂಗ್ ಆವರು ಆರೋಗ್ಯವಾಗಿದ್ದು, ಯಾವುದೇ ಸಮಸ್ಯೆಗಳು ಇಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
*BJP ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು*
https://pragati.taskdun.com/arun-singhillhospitalizedmangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ