ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರೂ ಅಧಿಕಾರಿಗಳಿಗೆ ನೋಟೀಸ್ ನೀಡಿ ವಾರ್ನಿಂಗ್ ಕೊಟ್ಟಿದ್ದರೂ ಸುಮ್ಮನಾಗದ ಡಿ.ರೂಪಾ ಇದೀಗ ರೋಹಿಣಿ ಸಿಂಧೂರಿಗೆ ಸಂಬಂಧಿಸಿದ ಮತ್ತಷ್ಟು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಬಾರಿ ನನ್ನನ್ನು ಯಾರು ತಡೆಯುತ್ತಾರೆ ನೋಡೋಣ ಎಂದು ಸರ್ಕಾರಕ್ಕೂ ಸೆಡ್ಡು ಹೊಡೆದಿದ್ದಾರೆ.
ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸೇರಿದ್ದು ಎನ್ನಲಾದ ಯಲಹಂಕ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಮನೆಯ ಫೋಟೋಗಳನ್ನು ಡಿ.ರೂಪಾ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ರೋಹಿಣಿ ಸಿಂಧೂರಿ ನನ್ನ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿಲ್ಲ. ಸರ್ಕಾರಕ್ಕೆ ಸಿಂಧೂರಿ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಜರ್ಮನ್, ಇಟಾಲಿಯನ್ ಪೀಠೋಪಕರಣ ತರಿಸಿದ್ದಾರೆ. ಕೋಟ್ಯಂತರ ರೂಪಾಯಿ ಪೀಠೋಪಕರಣಗಳನ್ನು ತರಿಸಲಾಗಿದೆ. ರೋಹಿಣಿ ವಿರುದ್ಧ ಭ್ರಷ್ಟಾಚಾರ, ತೆರಿಗೆ ವಂಚನೆ ಆರೋಪಗಳಿವೆ. ಆದರೂ ಆಕೆಯನ್ನು ರಕ್ಷಿಸುವ ಕೆಲಸವಾಗುತ್ತಿದೆ. ಆಕೆಯನ್ನು ರಕ್ಷಿಸುತ್ತಿರುವವರು ಯಾರು ಎಂಬುದು ಗೊತ್ತಾಗಬೇಕು, ಸಂಪೂರ್ಣ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿ; ಇಬ್ಬರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ*
https://pragati.taskdun.com/d-rooparohini-sindhurinoticestate-govt/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ