ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಪರೀಕ್ಷೆಯಲ್ಲಿನ ಕೆಲ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 9ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. 5,716 ಕಾಲೇಜುಗಳ ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪರೀಕ್ಷೆ ನಕಲು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷೆ ನಡೆಯುವ 15 ನಿಮಿಷಗಳ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿರಬೇಕು ಎಂದರು.
ಮೊದಲ ಬಾರಿಗೆ ಪಿಯುಸಿ ಪರೀಕ್ಷೆಗೆ ಬಹುಆಯ್ಕೆ ಇರಲಿದೆ. ಮಕ್ಕಳು ಉತ್ತೀರ್ಣರಾಗಲು 3 ಹಂತದ ಪ್ರಶ್ನೆಗಳು ಇರಲಿದೆ. ದ್ವಿತೀಯ ಪಿಯು ಪರೀಕ್ಷೆ ಮುಗಿದ ಬಳಿಕ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ಸೂಕ್ತ ಭದ್ರತೆ ಒದಗಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಎಲ್ಲಾ ರೀತಿ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.
*ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಗೆ ಸಿಎಂ ಬೊಮ್ಮಾಯಿ ಸೂಚನೆ*
https://pragati.taskdun.com/ksrtcfree-bus-passambari-utsava-buscm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ