ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗದ ವರದಿ ಜಾರಿಗೆ ತರಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರಿ ನೌಕರರ ಪರ ಧ್ವನಿಯೆತ್ತಿದರು. ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗದ ವರದಿ ಜಾರಿ ಸ್ವಾಭಾವಿಕವಾದ ಅಂಶ. ಅದನ್ನು ಜಾರಿಗೆ ತರಬೇಕಾದ್ದು ಸರ್ಕಾರದ ಕೆಲಸ. ಸರ್ಕಾರಿ ನೌಕರರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಮಾಡಿಕೊಡದೇ 7ನೇ ವೇತನ ಆಯೋಗದ ವರದಿ ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಲಿ ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿ ಮತ್ತು ಒಪಿಎಸ್ ಜಾರಿಗೆ ತರುವಂತೆ ಒತ್ತಾಯಿಸಿ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಮಾರ್ಚ್ 1ರಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರಿ ನೌಕರರ ಪರ ಬೆಂಬಲ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ.
ಸರಕಾರ ಒಂದೆರಡು ದಿನದಲ್ಲಿ ಸರಕಾರಿ ನೌಕರರ ಸಂಘದ ಜೊತೆ ಮಾತುಕತೆ ನಡೆಸುವ ನಿರೀಕ್ಷೆ ಇದ್ದು, ಎರಡರಲ್ಲಿ ಒಂದು ಬೇಡಿಕೆಗೆ ಅಸ್ತು ಎನ್ನುವ ಮೂಲಕ ಮುಷ್ಕರ ಕೈಬಿಡಲು ಮನವಿ ಮಾಡುವ ಸಾಧ್ಯತೆ ಇದೆ.
https://pragati.taskdun.com/7th-pay-commissionopsstate-govt-employeescm-basavaraj-bommai/
*ವಿದಾಯದ ಭಾಷಣ…ವಿಧಾನಸಭೆಯಲ್ಲಿ ಭಾವುಕರಾದ ಮಾಜಿ ಸಿಎಂ ಯಡಿಯೂರಪ್ಪ*
https://pragati.taskdun.com/b-s-yedyurappavidhanasabhe-last-speech/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ