ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ರೂಪಾ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಡಿ.ರೂಪಾ ಅವರಿಗೆ ನಿರ್ಬಂಧಕಾಜ್ಞೆ ನೀಡುವಂತೆ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ 74ನೇ ಸಿಟಿ ಸಿವಿಲ್ ಕೋರ್ಟ್, ಡಿ.ರೂಪಾ ಅವರಿಗೆ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ.
ಅಲ್ಲದೇ ರೂಪಾ ಅವರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ನೋಟೀಸ್ ಜಾರಿ ಮಾಡಿದೆ. ಮಾರ್ಚ್ 7ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ.
ಇನ್ನು ಡಿ.ರೂಪಾ ತಮ್ಮ ವಿರುದ್ಧ ಮಾಡಿರುವ ಸಾಲು ಸಾಲು ಆರೋಪಗಳಿಗೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
*ಸಿ.ಟಿ.ರವಿ ಕೃತ್ಯಕ್ಕೆ ಮಾತಿನಲ್ಲೇ ಚಾಟಿ ಬೀಸಿದ ಸಿದ್ದರಾಮಯ್ಯ*
https://pragati.taskdun.com/siddaramaiahc-t-ravinon-vegtemple-visitcongresstweet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ