ಪ್ರಗತಿವಾಹಿನಿ ಸುದ್ದಿ, ಬೆಂಗಳೂರಿಗೆ: ಕೇಂದ್ರ ಸಚಿವರು ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಂಗಳೂರಿಗೆ ಆಗಮಿಸಿದ್ದು, ಚುನಾವಣೆ ಕಾರ್ಯಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಪ್ಪಿ ಮುದ್ದಾಡಿದ ಧರ್ಮೇಂದ್ರ ಪ್ರಧಾನ್, ಗುರುವಾರ ಸಂಜೆ ಆತ್ಮೀಯವಾಗಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕಂದಾಯ ಸಚಿವರಾದ ಆರ್. ಅಶೋಕ್ ಹಾಜರಿದ್ದರು.
ಕರ್ನಾಟಕ ಚುನಾವಣೆಯ ಜವಾಬ್ದಾರಿಯನ್ನು ಬಿಜೆಪಿ ಧರ್ಮೇಂದ್ರ ಪ್ರಧಾನ್ ಹೆಗಲಿಗೆ ಹಾಕಿದ್ದು, ಒಂದೆರಡು ದಿನದಲ್ಲೇ ಅವರು ಅಧಿಕೃತವಾಗಿ ಬಿಜೆಪಿ ಚುನಾವಣೆ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
https://pragati.taskdun.com/cm-basavaraj-bommaividhanasabhekarnataka-budget/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ