Latest

*ರಸ್ತೆಯಲ್ಲಿಯೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ; ಉತ್ತರ ಕನ್ನಡದಲ್ಲಿ ಭೀಕರ ಘಟನೆ*

ಪ್ರಗತಿವಾಹಿನಿ ಸುದ್ದಿ; ಭಟ್ಕಳ: ಪತಿ-ಪತ್ನಿ, ಮಗ-ಸೊಸೆ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದಿದೆ.

ಹಾಡಹಗಲೇ ರಸ್ತೆಯಲ್ಲಿಯೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದ್ದು, ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಶಂಭು ಭಟ್ (65), ಪತ್ನಿ ಮಹಾದೇವಿ ಭಟ್ (60), ಮಗ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಮೃತರು.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದು ಕುಟುಂಬವನ್ನೇ ಕೊಚ್ಚಿ ಕೊಲೆ ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯೇ ಬೆಚ್ಚಿ ಬಿದ್ದಿದೆ. ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

*ಅಧಿವೇಶನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡುತ್ತಾ ಗದ್ಗದಿತರಾದ ಸ್ಪೀಕರ್ ಕಾಗೇರಿ*

Home add -Advt

https://pragati.taskdun.com/15th-assemblysession-endspeaker-kageriemotionaladjournment/

Related Articles

Back to top button