Kannada NewsKarnataka NewsLatest

*ಪಂತಬಾಳೆಕುಂದ್ರಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ : ಸಿದ್ದರಾಮಯ್ಯ ಸೇರಿ ಹಲವರ ಉಪಸ್ಥಿತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಬುಧವಾರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕ್ ಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್ ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ವಿನಯ ಕುಲಕರ್ಣಿ, ಜಮೀರ್ ಅಹ್ಮದ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮೈದಾನದಲ್ಲಿ 25 ಸಾವಿರ ಖುರ್ಚಿಗಳನ್ನು ಹಾಕಲಾಗಿದ್ದು, ಸಮಾವೇಶದಲ್ಲಿ 30 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.

*ಬಿಜೆಪಿ, ಜೆಡಿಎಸ್ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ*

https://pragati.taskdun.com/d-k-shivakumarsakaleshapuraprajadhwani/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button