ನೌಕರರಿಗೆ ಸರಕಾರದ ಕಠಿಣ ಎಚ್ಚರಿಕೆ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 7ನೇ ವೇತನ ಆಯೋಗದ ವರದಿ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿ ಬೇಡಿಕೆಗಳನ್ನು ಮುಂದಿಟ್ಟು ಸರಕಾರಿ ನೌಕರರು ಬುಧವಾರದಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಲು ನೌಕರರ ಸಂಘ ನಿರ್ಧರಿಸಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗಬಾರದೆಂದು ತಿಳಿಸಿದೆ.

ಇದರ ಬೆನ್ನಲ್ಲೆ ಮಂಗಳವಾರ ಸರಕಾರಿ ಕಠಿಣ ಎಚ್ಚರಿಕೆ ನೀಡುವ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ ಆಮ್ಲನ್ ಬಿಸ್ವಾಸ್ ಈ ಸುತ್ತೋಲೆ ಹೊರಡಿಸಿದ್ದಾರೆ.

ಸರಕಾರ ನೌಕರರು ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗದೆ ಇದ್ದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಹಾಗೊಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಒಂದೆಡೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸರಕಾರ ಮಾತುಕತೆ ನಡೆಸುತ್ತಿದ್ದರೆ ಇನ್ನೊಂದೆಡೆ ಇಂತಹ ಕಠಿಮ ಎಚ್ಚರಿಕೆ ಸುತ್ತೋಲೆ ಹೊರಡಿಸುವ ಮೂಲಕ ಸರಕಾರ ಒಂದು ಹೆಜ್ಜೆ ಮುಂದಿಟ್ಟಿದೆ.

ಆದರೆ ಯಾವುದೇ ಎಚ್ಚರಿಕೆಗೂ ಬಗ್ಗದೆ ನೌಕರರು ಕೆಲಸಕ್ಕೆ ಗೈರಗಬೇಕು. ಎಸ್ಮಾ ಜಾರಿ ಮಾಡಿ 10 ಲಕ್ಷ ನೌಕರರನ್ನು ಸರಕಾರ ಜೈಲಿಗೆ ಹಾಕುವುದಾದರೆ ಹಾಕಲಿ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸವಾಲು ಹಾಕಿದ್ದಾರೆ.

ಮಂಗಳವಾರ ಮಧ್ಯರಾತ್ರಿಯವರೆಗೂ ಮುಖ್ಯಮಂತ್ರಿಗಳು ಹಾಗೂ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಭೆ ನಡೆದಿದ್ದು, ಯಾವುದೇ ಅಂತಿಮ ತೀರ್ಮಾನವಾಗಿಲ್ಲ. ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಷಡಕ್ಷರಿ ತಿಳಿಸಿದ್ದಾರೆ. ಬುಧವಾರ ಬೆಳಗಿನ ಜಾವದವರೆಗೂ ಪದಾಧಿಕಾರಿಗಳ ಸಭೆ ಮುಂದುವರಿದಿತ್ತು.

 

https://pragati.taskdun.com/i-am-confident-that-the-problem-of-government-employees-will-be-resolved-amicably-chief-minister-basavaraja-bommai/

7ನೇ ವೇತನ ಆಯೋಗ: ಮುಖ್ಯಮಂತ್ರಿಗಳ ಜೊತೆ ಸರಕಾರಿ ನೌಕರರ ಸಭೆ ಮುಕ್ತಾಯ

https://pragati.taskdun.com/7th-pay-commission-govt-employees-strike/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button