ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್. ಸಹಯೋಗದೊಂದಿಗೆ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭ ಮಾ.2 ರಂದು ಬೆಳಗ್ಗೆ 10 ಗಂಟೆಗೆ ರಾಜಹಂಸಗಡದ ಕೋಟೆ ಆವರಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ ಕುಮಾರ್ ಅವರು ಭಾಗವಹಿಸಲಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಎಂ.ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.
ಜಿಲ್ಲೆಯ ಎಲ್ಲ ಸಂಸದರು, ಎಲ್ಲ ಶಾಸಕರು, ರಾಜ್ಯಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಎಲ್ಲಾ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಮಹೇಶ ಕರಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ವಿಶೇಷ ಪ್ರಯತ್ನ ಮಾಡಿ ರಾಜಹಂಸಗಡ ಅಭಿವೃದ್ಧಿಗೆ ಕೈಹಾಕಿದರು. 50 ಲಕ್ಷ ರೂ. ವೆಚ್ಚ ಮಾಡಿ ಭವ್ಯ ಶಿವಾಜಿ ಪುತ್ಥಳಿ ಹಾಗೂ ಸುಮಾರು 4 ಕೋಟಿ ರೂ. ವೆಚ್ಚ ಮಾಡಿ ಇತರ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ.
ಐದು ತಾಸು ತಡವಾಗಿ ಆರಂಭವಾದ ಕಾರ್ಯಕ್ರಮ
https://pragati.taskdun.com/the-program-started-five-hours-late/
*ಕಾಡಂಚಿನಲ್ಲಿ ಎಸ್ ಟಿ ಸಮುದಾಯಗಳಿಗೆ ಪುನರ್ವಸತಿ ವ್ಯವಸ್ಥೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
https://pragati.taskdun.com/cm-basavaraj-bommaimalai-mahadeshwara-hillvijayasankalpa-yatre/
ಉದ್ಧವ್ ಠಾಕ್ರೆ ಭೇಟಿಯಾದ ಎಂಇಎಸ್ ನಿಯೋಗ: ಅಚ್ಚರಿ ತಂದ ಕೊಂಡುಸ್ಕರ್ ಉಪಸ್ಥಿತಿ
https://pragati.taskdun.com/mes-delegation-meets-uddhav-thackeray-konduskars-presence-comes-as-a-surprise/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ