Latest

BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗಾಗಿ ಲೋಕಾಯುಕ್ತ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಪ್ರಕರಣ ಸಂಬಂಧ ಇದೀಗ ಶಾಸಕರು ಸೇರಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ 1 ಆರೋಪಿ, ಪ್ರಶಾಂತ್ ಎ2 ಆರೋಪಿ, ಕೆ ಎಸ್ ಡಿ ಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5 ಹಾಗೂ ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆರೋಪಿಯಾಗಿದ್ದಾರೆ.

ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button