Latest

ಜೈಲಿಗೆ ಹೋಗಿ ಬಂದ ಅಮಿತ್ ಶಾರಿಂದ ನಾವು ಪಾಠ ಕಲಿಬೇಕಾ? ಸಿದ್ದರಾಮಯ್ಯ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಅಂದ್ರೆ ಭ್ರಷ್ಟ ಜನತಾ ಪಾರ್ಟಿ ಎಂದು ಕರೆಯಬೇಕಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನ್ನ ರಾಜಕೀಯ ಜೀವನದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಮೋದಿ, ಅಮಿತ್ ಶಾ, ಸಿಎಂ ಬೊಮಮಯಿ, ಕಟೀಲು ಬರಿ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಭ್ರಷ್ಟಾಚಾರ ಆರೋಪ ಮಾಡಿದರೆ ದಾಖಲಾತಿ ಕೊಡಿ ಅಂತಾರೆ. ಹಿಂದಿನ ಸರ್ಕಾರದಲ್ಲಿಯೂ ಭ್ರಷ್ಟಾಚಾರ ಇತ್ತು ಎಂದು ಸಮರ್ಥಿಸಿಕೊಳ್ಳುತ್ತಾರೆ. ಪಿಎಸ್ ಐ ಹಗರಣದಲ್ಲಿ ಎಡಿಜಿಪಿ ಸುಮ್ಮನೇ ಜೈಲಿಗೆ ಹೋದ್ರಾ? ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿದೆದಾರ ಆತ್ಮಹತ್ಯೆ ಮಾಡಿಕೊಂಡ. ಪ್ರಧಾನಿಗೆ ಗುತ್ತಿಗೆದಾರರು ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ. ಈಗ ಶಾಸಕರ ಪುತ್ರನೇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೇನು ಸಾಕ್ಷಿ ಬೇಕು? ಎಂದು ಪ್ರಶ್ನಿಸಿದರು.

ಜೈಲಿಗೆ ಹೋಗಿ ಬಂದಿರುವ ಅಮಿತ್ ಶಾ ರಿಂದ ನಾವು ಪಾಠ ಕಲೀಬೇಕಾ? ಸಿದ್ದರಾಮಯ್ಯ ಸರ್ಕಾರ ಇದ್ದಾಗ ರಾಜ್ಯ ಕಾಂಗ್ರೆಸ್ ದೆಹಲಿ ಹೈಕಮಾಂಡ್ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಈಗ ವಾರಕ್ಕೆ ಮೂರು ಬಾರಿ ರಾಜ್ಯಕ್ಕೆ ಭೇಟಿ ಕೊಡುತ್ತಿರುವ ಅಮಿತ್ ಶಾ, ಪ್ರಧಾನಿ ಮೋದಿ ಶಾಸಕರ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬಗ್ಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button