ಪ್ರಗತಿವಾಹಿನಿ ಸುದ್ದಿ; ಮುಂಬೈ: ಭಾರತೀಯ ನೌಕಾಪಡೆಯ ಲಘು ಹೆಲಿಕಾಪ್ಟರ್ ಪತನಗೊಂಡ ಘಟನೆ ಮುಂಬೈ ಕರಾವಳಿ ತೀರದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಮುಂಬೈ ಕರಾವಳಿಯಲ್ಲಿ ನಿಯದಂತೆ ವಿಹಾರದಲ್ಲಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಅಪಘಾತಕ್ಕೀಡಾಗಿ ಪತನಗೊಂಡಿದೆ.
ತಕ್ಷಣ ನೌಕಾ ಪಡೆಯ ಗಸ್ತು ಕ್ರಾಫ್ಟ್ ಮೂಲಕ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾ ಪಡೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ