ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ಮಹಿಳೆಯೊಬ್ಬರು ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರಿನ ಬಸ್ ತಂಗುದಾಣದಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ. ತಾಯಿ ಮತ್ತು ಮಕ್ಕಳು ಚೇತರಿಸಿಕೊಂಡಿದ್ದು, ಯಾವುದೇ ಅಪಾಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಅವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಈ ಘಟನೆಯು ಜಿಲ್ಲಾಧಿಕಾರಿ ಕಚೇರಿಯ ಎದುರಿಗೆ ಹೊರಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯುತ್ತಮ ಚಿಕಿತ್ಸೆ ನೀಡಲು ಸೂಚನೆ:
ಆದಾಗ್ಯೂ ಮಾಧ್ಯಮಗಳ ವರದಿ ಗಮನಕ್ಕೆ ಬಂದ ತಕ್ಷಣವೇ ಜಿಲ್ಲಾ ಸರ್ಜನ್ ಜತೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಹಿಳೆ ಮತ್ತು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅತ್ಯುತ್ತಮ ಚಿಕಿತ್ಸೆ ನೀಡಬೇಕು ಎಂದು ಸೂಚನೆಯನ್ನು ನೀಡಿದರು.
ಸಂಪೂರ್ಣ ಆರೋಗ್ಯ ಸುಧಾರಣೆಯಾಗುವವರೆಗೆ ಆಸ್ಪತ್ರೆಯಲ್ಲಿ ಇರಿಸಿಕೊಂಡು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿರುತ್ತಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ