ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಸುಮಲತಾ ಪಕ್ಷ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.
ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ನಾಳೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ನಾಳೆ ಸುಮಲತಾ ನಡೆಸಲಿರುವ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ.
ಈ ನಡುವೆ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು, ಮಂಡ್ಯ ಸಂಸದೆ ಸುಮಲತಾ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿರುವುದು ಸುಮಲತಾ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ನಾಳೆ ಮಧ್ಯಾಹ್ನ ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಸುದ್ದಿಗೋಷ್ಠಿ ಕರೆದಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಸಂಸದೆ ರಾಷ್ಟ್ರ ರಾಜಕಾರಣಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಿದ್ದು, ಬಿಜೆಪಿಯಿಂದ ಮಂಡ್ಯದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ