
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿಯಿರುವ ಹೊತ್ತಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿಗಮಗಳಿಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಸಿಎಂ ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಲಾಗಿದೆ.
ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.