ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ದಿಢೀರ್ ರದ್ದುಗೊಳಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿದೆ.
5 ಹಾಗೂ 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊನೇ ಕ್ಷಣದಲ್ಲಿ ಹೈಕೋ ರ್ಟ್ ಪರೀಕ್ಷೆ ರದ್ದುಪಡಿಸಿದ್ದು, ಪರೀಕ್ಷೆ ನಡೆಸಲು ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ತಿಳಿಸಿದ್ದಾರೆ.
ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪರೀಕ್ಷೆ ವಿರೋಧಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯಪೀಠ ಪ್ರಸಕ್ತ ಶೈಕ್ಷಣಿಕ ವರ್ಷದ ಪಬ್ಲಿಕ್ ಪರೀಕ್ಷೆ ನಡೆಸದಂತೆ ಆದೇಶ ನೀಡಿತ್ತು.
ಇದೀಗ ಮೇಲ್ಮನವಿ ವಿಚಾರಣೆ ಇಂದೇ ನಡೆಯುವ ನಿರೀಕ್ಷೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ