ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ಮತೊಮ್ಮೆ ಪ್ರಧಾನಿ ಮೋದಿಯವರನ್ನು ನರಹಂತಕ ಎಂದು ಕರೆದರೆ ನಾಲಿಗೆ ಸೀಳಿ ಬಿಡ್ತೀವಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಮಡಿಕೇರಿಯಲ್ಲಿ ನಡೆದ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಪ್ರಧಾನಿ ಮೋದಿಯವರನ್ನು ಇಡೀ ವಿಶ್ವವೇ ಮೆಚ್ಚಿದೆ. ವಿಶ್ವಗುರು ಎಂದು ಕರೆಯುತ್ತಿದೆ. ಹೀಗಿರುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿಯವರನ್ನು ನರಹಂತಕ ಎಂದು ಕರೆದಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸಭೆಯ ಮೂಲಕ ಸಿದ್ದರಾಮಯ್ಯನವರಿಗೆ ಮತೊಮ್ಮೆ ಎಚ್ಚರಿಕೆ ಕೊಡುತ್ತಿದ್ದೇನೆ ಪ್ರಧಾನಿ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಅವರ ನಾಲಿಗೆ ಸೀಳಿಬಿಡ್ತೀವಿ ಎಂದು ಹೇಳುತ್ತಿದ್ದೇವೆ ಎಂದು ಗುಡುಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ