ಮಾ.17ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ: “ಮಾ. 17ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸೇರಿದಂತೆ ಕಾಂಗ್ರೆಸ್ ನ ಹಲವು ಕಾಂಗ್ರೆಸ್ ಹಲವು ಮುಖಂಡರು ಭಾಗವಹಿಸುತ್ತಿದ್ದಾರೆ” ಎಂದರು.
“ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದ ಪ್ರಜಾಧ್ವನಿ ಯಾತ್ರೆಯನ್ನು ಯಶಸ್ಸಿಯಾಗಿ ನಡೆಸಲಾಗಿದೆ. ಇದೀಗ 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು” ಎಂದು ಅವರು ತಿಳಿಸಿದರು.
“ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಮತದಾರರಿಗೆ ಮನವರಿಕೆ ಮಾಡಿಕೊಡಲಾಗುವುದು. ಇನ್ನೂ ಹಲವು ಯೋಜನೆಗಳನ್ನು ಘೋಷಿಸಲಾಗುತ್ತಿದ್ದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಸಹ ಇವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು” ಎಂದು ಹೇಳಿದರು
ಪಕ್ಷಾಂತರ ಪ್ರಕ್ರಿಯೆ ಬಗ್ಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಪಕ್ಷಾಂತರ ಪರ್ವ ಸಹಜವಾಗಿದೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಲೆ ಏರಿಕೆಯಿಂದ ಜನ ತತ್ತರಿಸಿಹೋಗಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಆಡಳಿತದಿಂದ ರೋಸಿಹೋಗಿದ್ದಾರೆ ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಮತದಾರರು ಸಹ ಕಾಂಗ್ರೆಸ್ ಅಧಿಕಾರ ಬಯಸಿದ್ದಾರೆ” ಎಂದರು.
ಎಲ್ಲ ಕಡೆಗಳಲ್ಲಿ ಗೊಂದಲಗಳಿವೆ. ಆದರೆ, ಟಿಕೆಟ್ ಅಂತಿಮವಾಗಿ ಸಿಗುವುದು ಒಬ್ಬರಿಗೆ ಮಾತ್ರ. ನಾಯಕರ ಭವಿಷ್ಯ ಮತದಾರರ ಕೈಯಲ್ಲಿದೆ. ರಮೇಶ ಜಾರಕಿಹೊಳಿಯವರಿಗೂ ಇದು ಅನ್ವಯಿಸುತ್ತದೆ. ಪ್ರಜಾಧ್ವನಿಯಾತ್ರೆಯಲ್ಲಿ ಬಿಜೆಪಿ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಜನತೆ ಮುಂದೆ ಇಡಲು ಸಮಾವೇಶ ನಡೆಸಲಾಗುತ್ತಿದೆ ಎಂದರು.
ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ನೆಲೆಯೂರಿದೆ ಎಂದು ಬಿಜೆಪಿಗರು ಭ್ರಮೆಯಲ್ಲಿದ್ದಾರೆ. ಜನ ಗೋಕಾಕ ಕ್ಷೇತ್ರದ ಬದಲಾವಣೆ ಬಯಸಿದ್ದಾರೆ. ಶಾಸಕ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರನ್ನು ಬರಮಾಡಿಕೊಳ್ಳಲಾಗಿದೆ. ಗೋಕಾಕನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಅದಕ್ಕಾಗಿ ಪ್ರಜಾಧ್ವನಿ ಯಾತ್ರೆಯನ್ನು ಗಣ್ಯರ ಸಮ್ಮುಖದಲ್ಲಿ ಆಯೋಜಿಸಲಾಗಿದೆ ಎಂದರು.
ವಿವೇಕ್ ಜತ್ತಿ, ಸಿದ್ಧಲಿಂಗ ದಳವಾಯಿ, ಅಶೋಕ ಪೂಜಾರಿ, ಚಂದ್ರಶೇಖರ ಕೊಣ್ಣೂರ, ಲಖನ್ನ ಕಳಸನವರ,
ಮಂಜುಳಾ ರಾಮಗಾನಟ್ಟಿ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಬೆಳಗಾವಿ ಬಳಿ ಹೊಟೆಲ್ ಸಿಬ್ಬಂದಿಯಿಂದ ಗ್ರಾಹಕರ ಮೇಲೆ ಹಲ್ಲೆ: ದೂರು ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ