ಪ್ರಗತಿವಾಹಿನಿ ಸುದ್ದಿ; ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿಳಿದಿದ್ದಾರೆ.
ದೆಹಲಿಯಿಂದ ವಾಯುಸೇನೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬಂದಿಳಿದಿದ್ದು, ಬಳಿಕ ಅಲ್ಲಿಂದ ವಿಶೆಷ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದು, ಬಳಿಕ ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ, ಮದ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ