ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯದ ಜನತೆಯ ಬಹುದಿನಗಳ ಕನಸಾಗಿದ್ದ ಬೆಂಗಳೂರು- ಮೈಸೂರು ದಶಪಥ ಎಕ್ಸ್ ಪ್ರೆಸ್ ಹೈವೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 2 ನಗರಗಳ ನಡುವಿನ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಉದ್ಘಾಟನೆ ಮಾಡಿದರು.
12,000 ಕೋಟಿ ವೆಚ್ಚದ 210 ಕೀಮೀ ಉದ್ದದ ಹೆದ್ದಾರಿಯಿಂದಾಗಿ ಬೆಂಗಳೂರು-ಮೈಸೂರು ನಡುವಿನ ಸಂಚಾರದ ಸಮಯವನ್ನು ಕಡಿಮೆ ಮಾಡಲಿದೆ. ಹೈವೆ ಉದ್ಘಾಟನೆ ಬಳಿಕ ಪ್ರಧಾನಿ ಮೋದಿ ರಸ್ತೆ ಕಾಮಗಾರಿ ಗ್ಯಾಲರಿ ವೀಕ್ಷಣೆ ಮಾಡಿದರು.
ಇದೇ ವೇಳೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಲನೆ ನೀಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿಯವರಿಗೆ ರೈತರ ಸಂಕೇತವಾಗಿ ಹಸಿರು ಶಾಲು ಹೊದಿಸಿ ಸನ್ಮಾನ ಮಾಡಿದರು.
ಇದೇ ವೇಳೆ 4128 ಕೋಟಿ ರೂ.ವೆಚ್ಚದ ಮೈಸೂರು – ಕುಶಾಲನಗರ 4 ಪಥಗಳ ಹೆದ್ದಾರಿ ಕಾಮಗಾರಿಯ 4 ಪ್ಯಾಕೇಜ್ ಹಾಗೂ ಷಟ್ಪಥ ಬೆಂಗಳೂರು- ಮೈಸೂರು ವಿಭಾಗ ರಾಷ್ಟ್ರೀಯ ಹೆದ್ದಾರಿ 275 ರ 2 ಪ್ಯಾಕೇಜ್ ಗಳ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ರಸ್ತೆ ಸರೈಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋಪಾಲಸ್ವಾಮಿ, ನಾರಾಯಣಗೌಡ, ಸಂಸದರಾದ ಸುಮಲತಾ, ಪ್ರತಾಪ್ ಸಿಂಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ