ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಿಂದೂ ಸಂಘಟನೆ ಕಾರ್ಯಕರ್ತರ ರ್ಯಾಲಿ ವೇಳೆ ಗಲಾಟೆ ನಡೆದು ಒಂದು ಸಮುದಾಯದ ಮನೆ, ಪ್ರಾರ್ಥನಾ ಮಂದಿರಗಳ ಮೇಲೆ ಕಲ್ಲು ತೂರಾಟ ನಡೆದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಾರೆ ಎಂದು ಹಿಂದು ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದರು. ಅಲ್ಲದೇ ಇಂದು ರಟ್ಟಿಹಳ್ಳಿಯಲ್ಲಿ ರ್ಯಾಲಿ ನಡೆಸಿದ್ದರು. ಈ ವೇಳೆ ಕಲ್ಲುತೂರಾಟ ನಡೆದಿದೆ.
ಮನೆಗಳು, ವಾಹನಗಳು, ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆ ಕಿಟಕಿ ಗಾಜು, ವಾಹನಗಳ ಗಾಜು ಪುಡಿ ಪುಡಿಯಾಗಿವೆ. ಕೆಲ ಶಾಲೆಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಅಲ್ಲದೇ ಆಟೋ ಚಾಲಕನೊಬ್ಬನನ್ನು ಥಳಿಸಿದ್ದು, ಆಟೋ ಜಖಂಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಟ್ಟಿಹಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬೂದಿಮುಚ್ಚಿದ ಕೆಂಡದಂತಾಗಿದೆ.
https://pragati.taskdun.com/hirebagewadi-basaveshwara-idol-dedication-on-march-20/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ