ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿರು ಬೇಸಿಗೆ ಝಳದ ನಡುವೆಯೇ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಸಿಲ ಧಗೆಯಿಂದ ಬಸವಳಿದಿದ್ದ ಜನತೆಗೆ ತಂಪೆರದಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಶಿರಸಿಯಲ್ಲೂ ಭಾರಿ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ವಲ್ಪ ಹೊತ್ತು ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಬಳ್ಳಾರಿ, ಬೀದರ್, ಗದಗ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ಕೊಡಗು ಮೈಸೂರು ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವೆಡೆಗಳಲ್ಲಿ ಮಾರ್ಚ್ 18ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
https://pragati.taskdun.com/haverirattihallistone-throw/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ