ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿವೆ. ಈ ಮಧ್ಯೆ ಕಾಂಗ್ರೆಸ್ ಶಾಸಕಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕುಂದಗೋಳ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ಕುಸುಮಾ ಶಿವಳ್ಳಿ, ಸಿಎಂ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ಕುಂದಗೋಳದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದಾಗಿದ್ದು, ಇದರ ಬೆನ್ನಲ್ಲೇ ಶಾಸಕಿ ಕುಸುಮಾ ಶಿವಳ್ಳಿ ಸಿಎಂ ಬೊಮ್ಮಾಯಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
https://pragati.taskdun.com/prajadhwani-conference-at-gokak-on-march-17-kpcc-working-president-satish-jarakiholi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ