ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ. 10 ದಿನಗಳ ಬಳಿಕ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.
ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ. ಪರೀಕ್ಷೆಯಲ್ಲಿ ಫಲಿತಾಂಶ ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶ ಶಾಲೆಗೆ ಮಾತ್ರವೇ ತಲುಪಿಸಬೇಕು. ಮಾರ್ಚ್ 27ರಿಂದ 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಕೋರ್ಟ್ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ