ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುವರಿ ಶಿಕ್ಷಕರ ಗುರುತಿಸುವಿಕೆಯಲ್ಲಿನ ಗೊಂದಲದಿಂದಾಗಿ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.
ಹೆಚ್ಚುವರಿ ಶಿಕ್ಷಕರ ಗುರುತಿಸುವಿಕೆ, ವರ್ಗಾವಣೆ ಸಂಬಂಧಿಸಿದ ಗೊಂದಲಗಳಿಗೆ ಪರಿಹಾರ ಸಿಕ್ಕಿದ್ದು ಮತ್ತೆ ವರ್ಗಾವಣೆ ನಡೆಸುವ ಕುರಿತು ಇಲಕಹೆ ತೀರ್ಮಾನಿಸಿದೆ. ಇದರಿಂದಾಗಿ ವರ್ಗಾವಣೆಗಾಗಿ ಕಾದು ಕುಳಿತಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ದೊರೆಯುವ ನಿರೀಕ್ಷೆ ಇದೆ.
ವರ್ಗಾವಣೆ ನಡೆಯುವಂತೆ ಮಾಡಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಸಂಬಂಧ ಪ್ರಯತ್ನ ನಡೆಸುತ್ತಿದ್ದು, ಸಂಘದ ನಿಯೋಗ ಶಾಲ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಈ ಸಂಧರ್ಬದಲ್ಲಿ ವರ್ಗಾವಣಾ ಪ್ರಕ್ರಿಯೆಗಳನ್ನು ಪುನರ್ ಪ್ರಾರಂಭಿಸುವ ಕಡತವನ್ನು ಶಿಕ್ಷಣ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗುಲಿ ತಿಳಿಸಿದ್ದಾರೆ.
ಇನ್ನು ಕೌನ್ಸಿಲಿಂಗ್ ಮೂಲಕ ನಡೆಯುವ ಶಿಕ್ಷಕರ ವರ್ಗಾವಣೆಗೂ ಚುನಾವಣಾ ಪ್ರಕ್ರಿಯೆಗಳಿಗೂ ಯಾವುದೇ ಸಂಬಂಧವಿಲ್ಲ. ಈ ವರ್ಗಾವಣೆ ಪ್ರಕ್ರಿಯೆಗೆ ನೀತಿ ಸಂಹಿತೆ ಅಡ್ಡಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ