ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ಈಗಾಗಲೇ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಹೈಕಮಾಂಡ್ ಕೈ ಸೇರಿದೆ. ಈ ನಡುವೆ ಜೆಡಿಎಸ್ ಭದ್ರ ಕೋಟೆಯಾದ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚುತ್ತಿದೆ.
ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಕೂಡ ಸ್ಪರ್ಧಿಸಲಿ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ನ 16 ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದು, ಮಂಡ್ಯದಿಂದ ಡಿ.ಕೆ.ಶಿವಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸದಿದ್ದರೆ ಮೂಲ ಕಾಂಗ್ರೆಸ್ಸಿಗರಿಗೆ ಮಂಡ್ಯದಿಂದ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
D.K.Shivakumar,Mandya,Ticket,Congress leaders
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ