ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದ್ದು, ನಗರಸಭಾ ಸದಸ್ಯರೊಬ್ಬರು ನೇಣಿಗೆ ಕೊರಳೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಶಿವರಾಮ ಸಾಫಲ್ಯ ಆತ್ಮಹತ್ಯೆಗೆ ಶರನಾದವರು. ಪುತ್ತೂರು ನಗರಸಭಾ ಸದಸ್ಯರಾಗಿದ್ದ ಶಿವರಾಮ ಸಾಫಲ್ಯ ಉರಮಾಲ್ ನ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಶಿವರಾಮ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪುತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ