ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ಪಲ್ಲವಿ ಪೂಜಾರಿ ಅವರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಆದೇಶ ಹೊರಡಿಸಿದ್ದಾರೆ.
ಹೆರಿಗೆಗಾಗಿ ಸಂಗೀತಾ ಎಂಬ ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ.ಪಲ್ಲವಿ 10 ಸಾವಿರ ಹಣ ಕೇಳಿದ್ದಾರೆ. ಅಷ್ಟೊಂದು ಹಣ ತಮ್ಮ ಬಳಿ ಇಲ್ಲ ಎಂದು ಸಂಗೀತಾ ಹೇಳಿದ್ದಾರೆ. ಹಣ ತರದೆ ಹೆರಿಗೆ ಮಾಡಿಸಲು ನಿರಾಕರಿಸಿದ್ದಾರೆ.
ಸಂಗೀತಾ ಹಲವೆಡೆ ವಿಚಾರಿಸಿ ಹಣ ಜೋಡಿಸಿ ತಂದ ಬಳಿಕ ವೈದ್ಯೆ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಗೆ ತಡವಾಗಿದ್ದರಿಂದ ಮಗು ಗರ್ಭದಲ್ಲಿಯೇ ಸಾವನ್ನಪ್ಪಿದೆ. ಇದರಿಂದ ರೊಚ್ಚಿಗೆದ್ದ ಕುಟುಂಬದವರು ಮಗು ಸಾವಿಗೆ ವೈದ್ಯೆ ಡಾ.ಪಲ್ಲವಿ ನಿರ್ಲಕ್ಷವೇ ಕಾರಣ ಎಂದು ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಡಾ.ಪಲ್ಲವಿ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ