Latest

*ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪನೆ: ಶಿವಶರಣರಿಗೆ ದೊಡ್ಡ ಕಾಣಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ : ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಶಿಕಾರಿಪುರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬಸವಕಲ್ಯಾಣ, ಉಡುತಡಿಯಲ್ಲಿ ಅವರ ಕೊಡುಗೆ ಇದೆ . ಕರ್ನಾಟಕದ ಜನತೆ ಇದಕ್ಕಾಗಿ ಯಡಿಯೂರಪ್ಪ ಅವರನ್ನು ಸದಾ ಸ್ಮರಿಸುತ್ತಾರೆ ಎಂದರು.

ಪರಿಶೀಲನೆ
2018 ಕೆ.ಎಸ್.ಆರ್.ಟಿ. ಸಿ ಗಾರ್ಡ್ ಹಾಗೂ ತಾಂತ್ರಿಕ ಅಧಿಕಾರಿಗಳು ಹುದ್ದೆ ತುಂಬುವ ಬಗ್ಗೆ ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button