*ಕ್ಷೇತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ ಬೆನ್ನಲ್ಲೇ ಮತ್ತೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ, ಸ್ಪರ್ಧೆ ಕ್ಷೇತ್ರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಹೈಕಮಾಂಡ್ ವರುಣಾದಲ್ಲಿ ಹೇಳಿದ್ರೇ ವರುಣಾ, ಕೋಲಾರದಲ್ಲಿ ಹೇಳಿದ್ರೆ ಕೋಲಾರ. ಇಲ್ಲ ಬಾದಾಮಿ ಅಂದ್ರೆ ಬಾದಾಮಿಯಲ್ಲೂ ನಾನು ಸ್ಪರ್ಧೆ ಮಾಡಲು ಸಿದ್ಧ. ಹೈಕಮಾಂಡ್ ನವರು ಏನು ಹೇಳುತ್ತಾರೆ ಎಲ್ಲಿಂದ ಸ್ಪರ್ಧೆ ಮಾಡಬೇಕು ಅಂತಾರೆ ಅಲ್ಲಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ಯುಗಾದಿ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ನನಗೆ ಯಾವ ಟೆನ್ಶನ್ನೂ ಇಲ್ಲ, ಗೊಂದಲವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Home add -Advt

Related Articles

Back to top button