Kannada NewsKarnataka NewsLatest

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ; ಯುವಕ್ರಾಂತಿಗೆ ಕ್ಷಣಗಣನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ.

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಂತರ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನ ನಾಲ್ಕನೇ ಗ್ಯಾಂರಟಿ ಯೋಜನೆ ಹಾಗೂ ಯುವಕರಿಗಾಗಿ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button