ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಮಂಗಳವಾರ ಸಂಜೆ ಭಾರತೀಯ ಉಪಖಂಡದಲ್ಲಿ ಸಂಭವಿಸಿದ 6.6 ತೀವ್ರತೆಯ ಪ್ರಬಲ ಭೂಕಂಪ 11 ಜನರನ್ನು ಬಲಿ ತೆಗೆದುಕೊಂಡಿದೆ.
ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಉತ್ತರ ಭಾರತದಾದ್ಯಂತ ಇದು ಭೀತಿಯನ್ನು ಉಂಟುಮಾಡಿದೆ. ಅಫ್ಘಾನಿಸ್ತಾನದ ಹಿಂದೂಕುಶ್ ಪರ್ವತಶ್ರೇಣಿ ಭೂಕಂಪನದ ಕೇಂದ್ರಬಿಂದುವಾಗಿದೆ.
ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರುಗಳು ಉಂಟಾಗುತ್ತಿದ್ದು ಇವುಗಳಲ್ಲಿ ಹಲವು ಸುಳಿವುಗಳು ಭೂಕಂಪನಕ್ಕೆ ಸಂಬಂಧಿಸಿದವುಗಳಾಗಿವೆ, ಪ್ರಪಂಚದ ನಾನಾ ಭಾಗಗಳಲ್ಲಿ ಪದೇಪದೆ ಭೂಕಂಪನಗಳು ಉಂಟಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ