
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಪುಣಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ 13 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ – ಕೊಲ್ಲಾಪುರ ಗಡಿಯಲ್ಲಿರುವ ಕೊಗನೋಳಿ ಚೆಕ್ ಪೋಸ್ಟ ನಲ್ಲಿ ತಪಾಸಣೆ ನಡೆಸುತ್ತಿರುವಾಗ ದಾಖಲೆಗಳಿಲ್ಲಗದೆ ಸಾಗಿಸಲಾಗುತ್ತಿದ್ದ ಹಣ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.