ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದಿನ ಐದು ದಿನಗಳಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ