Latest

*ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಮೀಸಲಾತಿ ಕಹಳೆ ಮೊಳಗಿಸಿದೆ. ರಾಜ್ಯ ಸರ್ಕಾರ ಎಸ್ ಸಿ ಎಸ್ ಟಿಗೆ ಮೋಸ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಎಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಎಸ್ಸಿ ಎಸ್ ಟಿ ಮೀಸಲಾತಿ ಹೆಚ್ಚಳ ಬಗ್ಗೆ ಕಳೆದ 5 ತಿಂಗಳಿಂದ ಹೇಳುತ್ತಿದ್ದರೂ ಶಿಫಾರಸು ಮಾಡಿರಲಿಲ್ಲ, ಈಗ ಮಾಡಿದ್ದಾರೆ. ಈ ಮೂಲಕ ಚುನಾವಣೆಯಲ್ಲಿ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದ್ದಾರೆ. ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು, ಬಸ್ ನಲ್ಲಿ ಕರೆದೊಯ್ದಿದ್ದಾರೆ.

Home add -Advt

Related Articles

Back to top button