ಪ್ರಗತಿವಾಹಿನಿ ಸುದ್ದಿ; ಬೀದರ್: ತಾಯಿಯೊಬ್ಬರು ಮಕ್ಕಳಿಬ್ಬರಿಗೂ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿ ತಾಂಡಾದಲ್ಲಿ ನಡೆದಿದೆ.
ತಾಯಿ ಮೀರಾಬಾಯಿ ಹಾಗೂ ಮಕ್ಕಳಾದ ಮೂರು ವರ್ಷದ ನಚ್ಚುಬಾಯಿ, 2 ವರ್ಷದ ಗೋಲುಬಾಯಿ ಮೃತರು. ಮಕ್ಕಳಿಬ್ಬರಿಗೂ ವಿಷವುಣಿಸಿ ಬಳಿಕ ಮೀರಾಬಾಯಿ ತಾನು ನೇಣಿಗೆ ಕೊರಳೊಡ್ಡಿದ್ದಾಳೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಧನ್ನೋರಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ