ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಆಘಾತದ ಮೇಲೆ ಆಘಾತ ಎದುರಾಗಿದೆ. ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 8ರ ಅಡಿಯಲ್ಲಿ ಅವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಈ ಪ್ರಕರಣದಲ್ಲಿ ನಿನ್ನೆ ಗುಜರಾತ್ ನ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ಪ್ರಕಟವಾದ ಕೆಲ ಹೊತ್ತಲೇ ರಾಹುಲ್ ಗಾಂಧಿಯವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ 6 ತಿಂಗಳ ಒಳಗಾಗಿ ವಯನಾಡ್ ಕ್ಷೇತ್ರಕ್ಕೆ ಮತ್ತೆ ಚುನಾವಣೆ ನಡೆಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ