Latest

*ಸಿದ್ದರಾಮಯ್ಯ ಭರ್ಜರಿ ರೋಡ್ ಶೋ; ಹೂಮಳೆಗರೆದು ಬರಮಾಡಿಕೊಂಡ ಕ್ಷೇತ್ರದ ಜನತೆ*

ಪ್ರಗತಿವಾಹಿನಿ ಸುದ್ದಿ; ಬಾದಾಮಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಂದು ಬಾದಾಮಿಗೆ ಆಗಮಿಸಿದ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಹೂಮಳೆಗರೆದು ಭರ್ಜರಿಯಾಗಿ ಸ್ವಾಗತಿಸಿದರು.

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಕಾರ್ಯಕ್ರಮದ ವೇದಿಕೆಗೆ ಕರೆದೊಯ್ದು ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೂ ಮಳೆ ಸುರಿಸುವ ಮೂಲಕ ಆಭಿಮಾನ ಮೆರೆದರು. ಕಬ್ಬಿನ ಹಾರ ಹಾಕಿ ಸಂಭ್ರಮಿಸಿದರು.

Home add -Advt

ಜಾನಪದ ಕಲಾ ತಂಡಗಳೊಂದಿಗೆ ರೋಡ್ ಶೋನಲ್ಲಿ ಭಾಗಿಯಾದ ಸಿದ್ದರಾಮಯ್ಯ ಅವರನ್ನು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಜಯಕಾರ ಕೂಗಿ ಬರಮಾಡಿಕೊಂಡರು.

Related Articles

Back to top button