ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎಕ್ಸ್ ಪ್ರೆಸ್ ವೇನಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೋ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಾಯಿ-ಮಗ ಸಾವನ್ನಪ್ಪಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕವಿತಾ (47), ಮಗ ಆರ್ಯ ಅಯ್ಯಪ್ಪನ್ (14) ಮೃತರು. ಕಾರು ಚಲಾಯಿಸುತ್ತಿದ್ದ ಆರ್ಯನ ತಂದೆ ಮುತ್ತಪ್ಪ (54) ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಡಗು ಮೂಲದ ನಾಪೋಕ್ಲು ಬಲಮುರಿಯ ನಿವಾಸಿಗಳಗಾಗಿದ್ದಾರೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಕುಟುಂಬ ಯುಗಾದಿಗೆ ಊರಿಗೆ ತೆರಳಿದ್ದರು. ಹಬ್ಬ ಮುಗಿಸಿ ಕಾರಿನಲ್ಲಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳು ಮುತ್ತಪ್ಪ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ